ತುಮಕೂರು: ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಅಮಾವಾಸ್ಯೆ ನ.26 ರಂದು ಸಂಜೆ 5.30ಕ್ಕೆ ಶ್ರೀ ಸಿದ್ದಲಿಂಗೇಶ್ವರಸ್ವಾಮಿಯವರಿಗೆ ಲಕ್ಷ ದೀಪೋತ್ಸವ ವಿಶೇಷ ಸೇವೆ ಹಾಗೂ ರಾತ್ರಿ ಬೆಳ್ಳಿ ಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.