ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ- 2ರ ವ್ಯಾಪ್ತಿಯ ನಾಗವಲ್ಲಿ ಗ್ರಾಮದಲ್ಲಿ ವಿದ್ಯುತ್ ಕಾಮಗಾರಿ ನಿರ್ವಹಿಸುತ್ತಿರುವುದರಿಂದ ನ.20ರಿಂದ ಡಿ.6ರವರೆಗೆ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಾಗವಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಾಳೆ ವ್ಯತ್ಯಯ
ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ- 2ರ ಸಿದ್ದಾರ್ಥನಗರ ಶಾಖಾ ವ್ಯಾಪ್ತಿ ಹೆಗ್ಗೆರೆ ವಿದ್ಯುತ್ ಉಪಸ್ಥಾವರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುತ್ತಿರುವುದರಿಂದ ನ. 21ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆಕೆಲ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸ್ಥಳಗಳು: ಭೀಮಸಂದ್ರ, ಹೆಗ್ಗೆರೆ ಮೆಡಿಕಲ್ ಕಾಲೇಜು, ಹೆಗ್ಗೆರೆ, ದೊಡ್ಡನಾರವಂಗಲ, ಬುಗುಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳು.