ತುಮಕೂರು: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಅರ್ಹರಿಂದ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು ವಿದ್ಯಾರ್ಥಿವೇತನದ ಪೋರ್ಟಲ್ (ಎಸ್ಎಸ್ಪಿ) http://ssp.karnataka.gov.in ಮೂಲಕ ನ.30ರೊಳಗಾಗಿ ಸಲ್ಲಿಸಬಹುದು. ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ, ಐಎಫ್ಎಸ್ಸಿ ಕೋಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಿದ್ಯಾರ್ಹತೆಗೆ ಸಂಬಂಧಿಸಿದ ಕಳೆದ ಸಾಲಿನ ಅಂಕಪಟ್ಟಿ ಹಾಗೂ ಪ್ರಸಕ್ತ ಸಾಲಿನಲ್ಲಿ ಓದುತ್ತಿರುವ ಮಾಹಿತಿ ಸಲ್ಲಿಸಬೇಕು.
ಮಾಹಿತಿಗೆ ಕಾಲೇಜಿನ ಪ್ರಾಂಶುಪಾಲರು, ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಸಂಪರ್ಕಿಸಬಹುದು.